Monday, 12th May 2025

ಸಂಸದೆ, ನಟಿ ನವನೀತ್’ಗೆ ಬೆದರಿಕೆ ಕರೆ

ನವದೆಹಲಿ: ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಸಂಸದೆ, ನಟಿ ನವನೀತ್ ರಾಣಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರಲ್ಲಿ ದೂರು ದಾಖಲು ಮಾಡಿ ದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನು ಮಾನ್ ಚಾಲೀಸಾ ಪಠಣೆ ಮಾಡಿರುವುದಕ್ಕೆ ಸಂಬಂಧಿಸಿ ದೇಶದ್ರೋಹದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿರುವ ಸಂಸದೆಗೆ ಇದೀಗ ಬೆದರಿಕೆ ಕರೆಗಳು ಬಂದಿವೆ.

ತನ್ನ ನಂಬರ್​ಗೆ 11 ಜೀವ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿರುವ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ನಿಂದಿಸಿದ್ದು, ಒಂದು ವೇಳೆ ಮಹಾರಾಷ್ಟ್ರಕ್ಕೆ ಬಂದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.

ದೂರು ಸ್ವೀಕರಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಶಾಸಕ ರವಿ ರಾಣಾ ಹಾಗೂ ಸಂಸದೆ ನವ್​ನೀತ್ ರಾಣಾ ದಂಪತಿ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ಶಿವಸೇನೆ ಕಾರ್ಯಕರ್ತರ ದೂರಿನ ಮೇರೆಗೆ ಪೊಲೀಸರು ಇವರನ್ನು ಕಳೆದ ಏಪ್ರಿಲ್​ 23ರಂದು ಬಂಧಿಸಿದ್ದರು. ಇವರಿಗೆ ಮೇ 4ರಂದು ಕೋರ್ಟ್​ ಜಾಮೀನು ನೀಡಿದೆ.