Wednesday, 14th May 2025

ಗೋವಾಕ್ಕೆ ಆಗಮಿಸಿದ ಮೂವರಲ್ಲಿ ಕೋವಿಡ್ ಸೋಂಕು ದೃಢ

ಪಣಜಿ: ಲಂಡನ್‌ನಿಂದ ಗೋವಾಕ್ಕೆ ಆಗಮಿಸಿರುವ ಪ್ರಮಾಣಿಕರ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಶುಕ್ರವಾರ ಈ ಕುರಿತು ಟ್ವೀಟ್ ಮಾಡಿ, ಯುಕೆಯಿಂದ ಎಐ-146 ವಿಮಾನ ಆಗಮಿಸಿದ ಬಳಿಕ 237 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರು ಪ್ರಯಾಣಿಕರಲ್ಲಿ ಸೋಂಕು ಕಾಣಿಸಿ ಕೊಂಡಿದೆ ಎಂದು ಹೇಳಿದ್ದಾರೆ.

ಎಂಟು ದಿನಗಳ ಬಳಿಕ ಅಥವಾ ಅದಕ್ಕಿಂತ ಮೊದಲು ಸೋಂಕಿನ ಲಕ್ಷಣಗಳು ಕಾಣಿಸಿ ಕೊಂಡರೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

ಕರೋನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ.