Sunday, 11th May 2025

ಸಿಎಎ ಜಾರಿ ಅಲ್ಲ, ಕರೋನಾ ನಿಯಂತ್ರಣದತ್ತ ಗಮನ ನೀಡಿ: ನಿತೀಶ್

ಪಟ್ನಾ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಜಾರಿಗೊಳಿಸುವುದರ ಬದಲು ಕರೋನಾ ವೈರಸ್‌ ನಿಯಂತ್ರಣದತ್ತ ಗಮನ ಹರಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಹೇಳಿದ್ದಾರೆ.

ಕರೋವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹೊತ್ತಿನಲ್ಲಿ, ಅವರು (ಅಮಿತ್‌ ಶಾ) ಸೋಂಕು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

‘ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಇದು ನಮ್ಮ ಮುಂದಿರುವ ದೊಡ್ಡ ಸವಾಲು. ಅವರು (ಅಮಿತ್ ಶಾ) ಸೋಂಕು ನಿಯಂತ್ರಿಸುವುದರತ್ತ ನೋಡಬೇಕು. ನಮಗಾಗಿ ಜಾರಿಯಾಗುವ ಯಾವುದೇ ಯೋಜನೆಯ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.

ನಿತೀಶ್‌ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ರಚಿಸಿದೆ. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಿಎಎ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ನಿತೀಶ್‌ ಒಮ್ಮತದ ನಿಲುವು ಹೊಂದಿಲ್ಲ.