Tuesday, 13th May 2025

ಲಷ್ಕರ್-ಎ-ತೊಯ್ಬಾ ಉಗ್ರರ ಬಂಧನ

ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಇಬ್ಬರು ಸ್ಥಳೀಯ ಉಗ್ರರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈಬ್ರಿಡ್ ಉಗ್ರಗಾಮಿಗಳು ಎಂದು ಪರಿಗಣಿಸಲಾಗಿದ್ದು ,ಭಯೋತ್ಪಾದಕ ದಾಳಿಯನ್ನು ನಡೆಸಿ ನಂತರ ದಿನನಿತ್ಯದ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಂದ 15 ಪಿಸ್ತೂಲ್ 30,300 ರೌಂಡ್ ಗುಂಡು ಗಳು ಮತ್ತು ಸೈಲೆನ್ಸರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.