Saturday, 10th May 2025

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜ.31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ.

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.