Sunday, 11th May 2025

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಸಿನಿಮಾ ಥಿಯೇಟರ್ ಗಳಲ್ಲಿ ಆಸನ ಸಾಮರ್ಥ್ಯವನ್ನು ಶೇಕಡಾ 50ಕ್ಕೆ ಸೀಮಿತಗೊಳಿಸಿ ನಿಯಮ ಪಾಲಿಸುವ ಷರತ್ತಿನೊಂದಿಗೆ ಪುನರ್ ಕಾರ್ಯಾರಂಭ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಅನ್‌ಲಾಕ್ 5.0ರ ಮಾರ್ಗಸೂಚಿಗಳ ಅನುಸಾರ ಅಕ್ಟೋಬರ್ 15 ರಿಂದ ಶಾಲೆ, ಕಾಲೇಜುಗಳನ್ನು ಮತ್ತೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದೆ. ಆದರೆ ಅಂತಿಮ ನಿರ್ಧಾರವನ್ನು ಆಯಾ ರಾಜ್ಯಗಳು ಮತ್ತು ಆಯಾ ಸಂಸ್ಥೆಗಳಿಗೆ ಬಿಡಲಾ ಗಿದೆ.

ಮಾರ್ಗಸೂಚಿಗಳ ಪ್ರಕಾರ, ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾ ಗುವುದು, ಇದಕ್ಕಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಹೊರಡಿ ಸುತ್ತದೆ.

Leave a Reply

Your email address will not be published. Required fields are marked *