Saturday, 10th May 2025

ಉ.ಪ್ರದೇಶ ವಿಧಾನಪರಿಷತ್ ಚುನಾವಣೆ: ಬಿಗಿ ಭದ್ರತೆ ನಡುವೆ ಮತ ಎಣಿಕೆ

ಲಕ್ನೋ: ಉತ್ತರಪ್ರದೇಶದ 11 ವಿಧಾನಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಗುರುವಾರ ಬಿಗಿ ಭದ್ರತೆ ನಡುವೆ ಲಕ್ನೋದ ರಮಾಬಾಯ್ ಅಂಬೇಡ್ಕರ್ ಮೈದಾನದಲ್ಲಿ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ.

ಹನ್ನೊಂದು ಎಂಎಲ್ ಸಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶೇ.55.47ರಷ್ಟು ಮತದಾನವಾಗಿತ್ತು. 11 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ 199 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಉತ್ತರಪ್ರದೇಶದ ವಿಧಾನಪರಿಷತ್ ನ ಪದವೀಧರ ಕ್ಷೇತ್ರದ ಐದು ಸ್ಥಾನಕ್ಕೆ ಹಾಗೂ ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಮತಎಣಿಕೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ಹೇಳಿದೆ.  ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಮತಎಣಿಕೆಗೆ 14 ಸುತ್ತು ನಡೆಯಲಿದ್ದು, ಮಧ್ಯಾಹ್ನದೊಳಗೆ 11 ಎಂಎಲ್ ಸಿ ಕ್ಷೇತ್ರಗಳ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *