ಕಾನ್ಪುರ: ಮದುವೆ ಸಮಾರಂಭ ಮುಗಿಸಿ ತಡ ರಾತ್ರಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದ (car accident) ರಭಸಕ್ಕೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇದರ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ (Social Media) ವಿಡಿಯೋ ವೈರಲ್ (Viral Video) ಆಗಿದೆ.
ಉತ್ತರ ಪ್ರದೇಶದ ಕಾನ್ಪುರದ ಗಂಗಾಪುರ ಕಾಲೋನಿಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ವಸತಿ ಪ್ರದೇಶದ ಕಿರಿದಾದ ಲೇನ್ನಲ್ಲಿ ಈ ಘಟನೆ ಸಂಭವಿಸಿದೆ. ಕಾರು ಚಾಲಕ ಪಾನಮತ್ತನಾಗಿದ್ದರಿಂದ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಭೀಕರ ಅಪಘಾತದ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ನವೆಂಬರ್ 28ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬುರ್ಖಾ ತೊಟ್ಟ ಮಹಿಳೆ ತನ್ನ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ರಸ್ತೆ ಬದಿಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿರುವಾಗ ವೇಗವಾಗಿ ಬಂದ ಕಾರು ಯುವತಿಗೆ ಮುಂಭಾಗದಿಂದ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದೊಯ್ದಿದೆ. ಸ್ವಲ್ಪ ದೂರ ಹೋದ ಅನಂತರ ಚಾಲಕ ಕಾರು ನಿಲ್ಲಿಸಿದ್ದಾನೆ.
#kanpur @kanpurnagarpol @AmritVichar शादी से घर लौट रही युवती को नशे में धुत कार सवार ने टक्कर मारी पब्लिक ने चालक को पकड़कर 112 डायल किया। आरोप है कि 1.30 घंटे तक नहीं आई। इस पर पब्लिक ने छोड़ दिया और उसने दूसरे व्यक्ति के पैर पर गाड़ी चढ़ा दी। 2 दिन बाद भी कार्रवाई नहीं हुई। pic.twitter.com/LSxsenqDaz
— Gaurav Srivastav (@GauravS32967182) November 30, 2024
ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಅನಂತರ ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಸುಮಾರು 2 ಗಂಟೆಗಳ ಕಾಲ ಚಾಲಕನನ್ನು ಹಿಡಿದು ಇಟ್ಟುಕೊಂಡಿದ್ದರು ಸ್ಥಳೀಯರು. ಆದರೆ ಪೊಲೀಸರು ಸ್ಥಳಕ್ಕೆ ಬಾರದೇ ಇದ್ದುದರಿಂದ ಚಾಲಕನಿಗೆ ಎಚ್ಚರಿಕೆ ನೀಡಿ, ಅವನ ವಿವರಗಳನ್ನು ಪಡೆದು ಕಳುಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Digital Arrest : ಮಹಿಳೆಯನ್ನು ವಿವಸ್ತ್ರಗೊಳಿಸಿ ಡಿಜಿಟಲ್ ಬಂಧನದಲ್ಲಿರಿಸಿದ ಸೈಬರ್ ಖದೀಮರು
ಘಟನೆಯ ಬಳಿಕ ಚಾಲಕ ಮತ್ತೊಬ್ಬನಿಗೆ ಕಾರು ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ. ಘಟನೆ ನಡೆದು ಎರಡು ದಿನ ಕಳೆದರೂ ಪೊಲೀಸರು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.