Sunday, 11th May 2025

West Bengal News : ಕಾಲುವೆಯಲ್ಲಿ 4ನೇ ತರಗತಿ ಬಾಲಕಿಯ ಶವ ಪತ್ತೆ: ಬಂಗಾಳದಲ್ಲಿ ಉದ್ವಿಗ್ನ ಸ್ಥಿತಿ

West Bengal News

ಬೆಂಗಳೂರು: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ (West Bengal News) ಗ್ರಾಮವೊಂದರಲ್ಲಿ 4 ನೇ ತರಗತಿಯ ಬಾಲಕಿಯ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಇದರಿಂದ ಕೆರಳಿದ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕೋಲ್ಕೊತಾದ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ

ಶುಕ್ರವಾರ ಸಂಜೆ ಬಾಲಕಿ ಕಾಣೆಯಾಗಿದ್ದು ಆಕೆಯ ಪೋಷಕರು ರಾತ್ರಿ 9 ಗಂಟೆಯ ವೇಳೆಗೆ ಪೊಲೀಸರಿಗೆ ಮಾಹಿತಿ ದೊರಕಿದೆ. ಮಧ್ಯರಾತ್ರಿಯ ವೇಳೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ನಂತರ ಅವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News : ಎನ್‌ಸಿಪಿ ಅಜಿತ್ ಪವಾರ್‌ ಬಣದ ಯುವ ನಾಯಕ ಕೊಲೆ

ಬರೂಯಿಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪಲಾಶ್ ಧಾಲಿ ಮಾತನಾಡಿ, “ರಾತ್ರಿ 9 ಗಂಟೆಗೆ ಬಾಲಕಿ ಕಾಣೆಯಾದ ಬಗ್ಗೆ ನಮಗೆ ಮಾಹಿತಿ ಬಂತು. ನಾವು ತನಿಖೆ ಪ್ರಾರಂಭಿಸಿದ್ದೇವೆ ಮತ್ತು ಆರೋಪಿಯನ್ನು ಗುರುತಿಸಿದ್ದೇವೆ. ಮಧ್ಯರಾತ್ರಿಯ ವೇಳೆಗೆ ಎಫ್ಐಆರ್ ದಾಖಲಿಸಲಾಗಿದೆ. ನಾವು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ನಂತರ ಶವವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ದುರಂತ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್‌, ಕಾನೂನು ಮತ್ತು ಸುವ್ಯವಸ್ಥೆಯ ವಿಫಲವಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ಥಳೀಯರ ಬೃಹತ್ ಪ್ರತಿಭಟನೆಯ ದೃಶ್ಯಗಳನ್ನು ಅವರು ಹಂಚಿಕೊಂಡಿದ್ದಾರೆ.