Saturday, 10th May 2025

ಸಂಸದ ಅಸಾದುದ್ದೀನ್ ಓವೈಸಿಗೆ ‘ಝಡ್‌’ ಶ್ರೇಣಿಯ ಭದ್ರತೆ

ನವದೆಹಲಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ತಕ್ಷಣವೇ ಜಾರಿಗೆ ಬರುವಂತೆ ‘ಝಡ್‌’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಭಾರತ ಸರ್ಕಾರವು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಯ ಭದ್ರತೆಯನ್ನು ಪರಿಶೀಲಿಸಿದೆ. ತಕ್ಷಣವೇ ಜಾರಿಗೆ ಬರುವಂತೆ ಅವರಿಗೆ ಸಿಆರ್‌ಪಿಎಫ್‌ನ ಝಡ್‌ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಸಭೆ ಮುಗಿಸಿ ದೆಹಲಿಗೆ ತೆರಳುತ್ತಿದ್ದಾಗ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.