Monday, 12th May 2025

ಮೊಹಮ್ಮದ್ ಜುಬೈರ್’ಗೆ ಐದು ದಿನ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ:ಆಲ್ಡ್ ನ್ಯೂಸ್ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರಪ್ರದೇಶ ಪೊಲೀಸರು ಜುಬೈರ್ ನನ್ನು ಬಂಧಿಸಿದ್ದರು. ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸೀತಾಪುರ್ ಕೋರ್ಟ್ ಜುಬೈರ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ನಂತರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್ ಜಸ್ಟೀಸ್ ಇಂದಿರಾ ಬ್ಯಾನರ್ಜಿ ಅವರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರಿಗೆ ನೋಟಿಸ್ ಜಾರಿಗೊ ಳಿಸಿದ್ದು, ಜುಬೈರ್ ಗೆ ಷರತ್ತಿನ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಂತರ ಷರತ್ತುಬದ್ಧ ಜಾಮೀನು ಆದೇಶದಲ್ಲಿ, ಜುಬೈರ್ ಬೆಂಗಳೂರು ಅಥವಾ ದೇಶದ ಇತರೆಡೆ ಯಾವುದೇ ಟ್ವೀಟ್ ಅಥವಾ ಸಾಕ್ಷ್ಯ ನಾಶಪಡಿಸುವಂತಿಲ್ಲ ಎಂದು ಸೂಚನೆ ನೀಡಿದೆ.