Monday, 12th May 2025

ಕಾರು- ಕೆ.ಎಸ್.ಆರ್.ಟಿ.ಸಿ ಬಸ್ಸಿನ ಅಪಘಾತ: ಮೂವರ ಸಾವು

ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವನ ಸ್ಥಿತಿ ಗಂಭೀರ, ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಾವಿಗೀಡಾದವರು ಹಾಗೂ ಗಾಯಾಳುವಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.