Saturday, 17th May 2025

ಜಾನಪದ ತಜ್ಞ ಅಮೃತ ಸೋಮೇಶ್ವರ ಸ್ವಗೃಹದಲ್ಲಿ ನಿಧನ

ಮಂಗಳೂರು: ಜಾನಪದ ತಜ್ಞ, ಕವಿ, ಕಥೆಗಾರ. ಅಮೃತ ಸೋಮೇಶ್ವರ(89) ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು.

ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.

ಸೋಮೇಶ್ವರ ಅವರು ಅನೇಕ ಕೃತಿಗಳನ್ನು ರಚಿಸಿದ್ದರು. ಸಾಹಿತ್ಯದ ಹೆಚ್ಚಿನ ಒಲವು ಹೊಂದಿದ್ದ ಇವರು ಕಥೆ ಕವನಗಳ ರಚನೆ ಜೊತೆಗೆ ಯಕ್ಷಗಾನ ಪ್ರಸಂಗವನ್ನು ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ.

Leave a Reply

Your email address will not be published. Required fields are marked *