ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯ, ಮುಕ್ತ ಗಂಗೋತ್ರಿ, ಮೈಸೂರು-೦೬ ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನಾಂಕವಾಗಿದೆ.
ಮುAದುವರೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಅನ್‌ಲೈನ್ ಮುಖಾಂತರ ಪಡೆಯಬಹುದು.
ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ಚಿಕ್ಕಬಳ್ಳಾಪುರ, ಸರ್ಕಾರಿ ಪ್ರಥಮ ದರ್ಜೆ (ಮುನ್ಸಿಪಾಲ್) ಕಾಲೇಜು, ಎಂ.ಜಿ. ರಸ್ತೆ, ಚಿಕ್ಕಬಳ್ಳಾಪುರ-೫೬೨೧೦೧ ದೂರವಾಣಿ ಸಂಖ್ಯೆ-೯೧೬೪೩೦೦೨೯೯, ೯೫೩೫೩೩೯೪೯೮, ಅನ್ನು ಸಂಪರ್ಕಿಸಬಹುದೆAದು ಪ್ರಾದೇಶಿಕ ನಿರ್ದೇಶಕ ಹೆಚ್. ಸುರೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.