Monday, 12th May 2025

Auto Accident: ಆಟೋ ಪಲ್ಟಿ: ಹಲವು ಮಕ್ಕಳಿಗೆ ಗಂಭೀರ ಗಾಯ..

ರಾಯಚೂರು ಶಾಲಾ ವಾಹನ ಅಪಘಾತ ಮಾಸುವ ಮುನ್ನವೇ ಶಹಪುರದಲ್ಲಿ ಮತ್ತೊಂದು ಘಟನೆ…

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು..

ಯಾದಗಿರಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಸಮೀಪದಲ್ಲಿ ಶಾಲಾ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರ ಮಕ್ಕಳು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಇಂತಹದ್ದೇ ಘಟನೆ ನಡೆದಿದೆ.

ಶಹಪುರ ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಡಿಡಿಯೂ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳನ್ನು ಆಟೋದಲ್ಲಿ ಕರೆತೊಯ್ಯುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಶಹಪುರ ನಗರದ ರಾಜ್ಯ ಹೆದ್ದ ದಾರಿಯಲ್ಲಿ ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಗೆ ಬಿದ್ದು ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಆಟೋದಲ್ಲಿ ಒಟ್ಟು ಎಂಟು ಜನ ವಿದ್ಯಾರ್ಥಿಗಳಿದ್ದು ಅದರಲ್ಲಿ ನಾಲ್ಕು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು ಶಹಪುರ್ ನಗರದ ಸಾರ್ವಜನಿಕಾ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಇನ್ನು ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿರುವ ವಿದ್ಯಾರ್ಥಿಗಳನ್ನು ಪಾಲಕರೇ ತಮ್ಮ ಮಕ್ಕಳನ್ನು ಮರೆಗೆ ಕರೆದುಕೊಂಡಿರುವ ಘಟನೆ ನಡೆದಿದೆ. ಒಟ್ಟಾರೆಯಾಗಿ, ಪಾಲಕರು ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಗೆ ವಾಹನ ಗಳಲ್ಲಿ ಕಳುಹುಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *