Wednesday, 14th May 2025

Award: 2024ನೇ ಸಾಲಿನ ಪ್ರೆಸ್‌ಕ್ಲಬ್ ‘ವರ್ಷದ ವ್ಯಕ್ತಿ’, ‘ವಿಶೇಷ ಪ್ರಶಸ್ತಿ’, ಸುವರ್ಣ ಮಹೋತ್ಸವ ಪ್ರಶಸ್ತಿ ಮತ್ತು ‘ವಾರ್ಷಿಕ ಪ್ರಶಸ್ತಿ’ಗಳ ಪ್ರದಾನ ಸಮಾರಂಭ

ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿ ವರ್ಷ ನೀಡುವ ಪ್ರೆಸ್‌ಕ್ಲಬ್ ‘ವರ್ಷದ ವ್ಯಕ್ತಿ ಪ್ರಶಸ್ತಿ’, ‘ವಿಶೇಷ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಗಳನ್ನು ಜನವರಿ 12 ರಂದು ಪ್ರದಾನ ಮಾಡಲಾಗುವುದು. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ೫೦ ಸಾಧಕ ಪತ್ರಕರ್ತರನ್ನು ಗುರುತಿಸಲಾಗಿದೆ. ಇದರ ಜೊತೆಗೆ ಪ್ರೆಸ್‌ಕ್ಲಬ್ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಿಸಿದ್ದು, ಐವರು ಹಿರಿಯ ಪತ್ರಕರ್ತರು ಹಾಗೂ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಪ್ರೆಸ್‌ಕ್ಲಬ್ ಆವರಣದಲ್ಲಿ ಜನವರಿ 12 ರಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅನೇಕ ಸಚಿವರು ಸೇರಿದಂತೆ ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳ ಲಿದ್ದಾರೆ.

ರಾಜ್ಯ ಕೈಗಾರಿಕಾ ವಲಯಕ್ಕೆ ನೀಡುತ್ತಿರುವ ಉತ್ತೇಜನವನ್ನು ಪರಿಗಣಿಸಿ ಈ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡಿದ ಪ್ರಯುಕ್ತ ‘ವಿಶೇಷ ಪ್ರಶಸ್ತಿ’ಗೆ ಇಂಧನ ಸಚಿವ ಕೆ.ಜೆ. ಜಾರ್ಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಐವರು ಹಿರಿಯ ಪತ್ರಕರ್ತರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ 50 ಜನ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ’ ಯನ್ನು ನೀಡಲಾಗುತ್ತಿದೆ.

ಕಾರ್ಯಕ್ರಮದ ವರದಿಗಾಗಿ ತಮ್ಮ ಮಾಧ್ಯಮದ ವರದಿಗಾರರು, ವಿದ್ಯುನ್ಮಾನ ವರದಿಗಾರರು ಮತ್ತು ಛಾಯಾಗ್ರಾಹಕರುಗಳನ್ನು ಕಳುಹಿಸಿಕೊಡಬೇಕಾಗಿ ವಿನಂತಿ.

ಇದನ್ನೂ ಓದಿ: #KarnatakaPressClubCouncil

Leave a Reply

Your email address will not be published. Required fields are marked *