Saturday, 10th May 2025

ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ಹರಿಹರದಲ್ಲಿ ಆಯೋಜನೆಗೊಂಡಿರುವ ಬಂಡಾಯ ಸಾಹಿತ್ಯ ಗೋಷ್ಠಿಯಲ್ಲಿ ಭಾಗವಹಿಸಿದ್ದ ಬರಗೂರು ಅವರನ್ನು ಹರಿಹರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದು ಸಾಮಾನ್ಯ ಅನಾರೋಗ್ಯವಾಗಿದ್ದು, ಯಾವುದೇ ಆತಂಕವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಹರಿಹರದ ಗುರುಭವನದಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಕಾರು ಏರುವಾಗ ತಲೆ ಸುತ್ತು ಬಂದು ಸುಸ್ತಾದ ಬರಗೂರು ರಾಮಚಂದ್ರಪ್ಪ ಅಲ್ಲೇ ಕುಸಿದು ಕುಳಿತರು. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಯಿತು.