Thursday, 15th May 2025

CM Siddaramaiah: ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು; ಸಿದ್ದರಾಮಯ್ಯ ಬಣ್ಣನೆ

CM Siddaramaiah

ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಈ ಸುದ್ದಿಯನ್ನೂ ಓದಿ | Reliance Retail: ಇಸ್ರೇಲ್‌ನ ಡೆಲ್ಟಾ ಗಲಿಲ್ ಜತೆ ಭಾರತದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ ರಿಲಯನ್ಸ್ ರೀಟೇಲ್

ಈ ಸಂದರ್ಭದಲ್ಲಿ ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *