Sunday, 11th May 2025

ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‍ಗೆ ಚಾಣಕ್ಯನ ಆಗಮನ…!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ ಡ್ಯಾಮೇಜ್ ಕಂಟ್ರೋಲ್‍ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಅವರೇ ಅಖಾಡಕ್ಕಿಳಿದಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು, ಗುರುವಾರ ರಾಜ್ಯಕ್ಕೆ ಆಗಮಿ ಸುತ್ತಿದ್ದಾರೆ.

ಸಾಮಾನ್ಯವಾಗಿ ಅಮಿತ್ ಷಾ ಅವರು ರಾಜ್ಯಕ್ಕೆ ಬರುವ ಮೂರು ದಿನಗಳ ಮುಂಚೆಯೇ ಅವರ ಪ್ರವಾಸದ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಾಗುತಿತ್ತು. ಆದರೆ ಈ ಬಾರಿ ಪಕ್ಷದ ವತಿಯಿಂದ ಸಣ್ಣ ಸುಳಿವನ್ನೂ ಸಹ ಬಿಟ್ಟುಕೊಟ್ಟಿಲ್ಲ.

ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ, ಗೃಹ ಸಚಿವರ ಮುತ್ತಿಗೆಯಂತಹ ಚಟು ವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಆಡಳಿತದ ವಿರುದ್ಧ ಅವರ ಕಾರ್ಯ ಕರ್ತರೇ ದೊಡ್ಡ ಮಟ್ಟದಲ್ಲಿ ಆಕ್ರೋಶಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ರಾಜ್ಯ ಘಟಕದ ಬಳಿ ಕೇಂದ್ರ ಗೃಹ ಸಚಿವರ ಯಾವುದೇ ಕಾರ್ಯಕ್ರಮದ ಯಾವುದೇ ಮಾಹಿತಿ ಇಲ್ಲ ಎಂದು ರಾಜ್ಯ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.