Sunday, 11th May 2025

ಮುಂದಿನ ವಾರ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು :  ವಿವಿಧ ವೃತ್ತಿಪರ ಕೋರ್ಸ್ ಗಳಿಗಾಗಿ ಸಿಇಟಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಜೂ.12 ಅಥವಾ 14 ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ದಪಡಿಸುವ ಕಾರ್ಯ ನಡೆಯುತ್ತಿದ್ದು, ಜೂನ್ 12 ಅಥವಾ 14 ರಂದು ಸಿಇಟಿ ಫಲಿತಾಂಶ ಪ್ರಕಟ ವಾಗುವ ಸಾಧ್ಯತೆ ಇದೆ.