Saturday, 10th May 2025

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯ ಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದು ಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.