Sunday, 11th May 2025

ಕಳಪೆ‌ ರಸ್ತೆ ನಿರ್ಮಾಣ: ಗುತ್ತಿಗೆದಾರನಿಗೆ ಮೂರು ಲಕ್ಷ ರೂ. ದಂಡ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಕಳಪೆ‌ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ.

ಮೋದಿ ಆಗಮನ ಸಂದರ್ಭದಲ್ಲಿ ನಿರ್ಮಿಸಿದ್ದ ರಸ್ತೆ ಮೂರೇ ದಿನದಲ್ಲಿ‌‌ ಕಿತ್ತು ಹೋಗಿದ್ದ ಬಗ್ಗೆ ಪ್ರಧಾನಿ‌ ಕಾರ್ಯಾಲಯ ಸ್ಪಷ್ಟನೆ ಕೇಳಿತ್ತು.

ಇದು ಕಾಮನ್ ಮ್ಯಾನ್ ಸಿಎಂ ಎಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ಸೃಷ್ಟಿಸಿತ್ತು.

ಈ ಹಿನ್ನೆಲೆಯಲ್ಲಿ ಕಳಪೆ ರಸ್ತೆ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ. ಮೂವರು ಅಧಿಕಾರಿಗಳಿಗೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.