Sunday, 11th May 2025

ಆ.15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯು ರಜತ ಮಹೋತ್ಸವ ದಿನಾಚರಣೆಯ ಪ್ರಯುಕ್ತ ಸಾರ್ವ ಜನಿಕ ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸ ಲಾಗುತ್ತಿದೆ ಎಂಬುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಬಿಎಂಟಿಸಿಯ ರಜತ ಮಹೋ ತ್ಸವ ದಿನಾಚರಣೆ ನಿಟ್ಟಿನಲ್ಲಿ ಆಗಸ್ಟ್ 15, 2022ರಂದು ಒಂದು ದಿನ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಸಲುವಾಗಿ ಸರ್ಕಾರದ ಅನುಮೋದನೆ ನೀಡುವಂತೆ ಕೋರಲಾಗಿದೆ ಎಂದಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ರುವ ಹಿನ್ನಲೆಯಲ್ಲಿ, ಸಂಸ್ಥೆಯು ರಜತ ಮಹೋತ್ಸವ ಆಚರಿಸಲು ಆಗಸ್ಚ್ 15, 2022ರ ಸ್ವಾತಂತ್ರೋತ್ಸವ ದಿನದಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.