Monday, 12th May 2025

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ಉಚಿತ ವಿದ್ಯುತ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಣೆ ಮಾಡಿದೆ.

ಚಿಕ್ಕೋಡಿಯಲ್ಲಿ ಬುಧವಾರ ಆರಂಭವಾದ ಮೊದಲ ಹಂತದ ʼಪ್ರಜಾಧ್ವನಿ ಯಾತ್ರೆʼಗೆ ಚಿಕ್ಕೋಡಿಯಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ʼಕಾಂಗ್ರೆಸ್‌ ಗ್ಯಾರಂಟಿʼ ಸರಣಿಯ ಮೊದಲನೆ ಘೋಷಣೆಯನ್ನು ನಾಯಕರು ಮಾಡಿದರು.

ಪೋಸ್ಟರ್‌ ಬಿಡುಗಡೆ ಮಾಡಿದ ಕೆಪಿಸಿಸಿ ಉಸ್ತಿವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರರು, ‘ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ ಎಂದರು.

Read E-Paper click here