Monday, 12th May 2025

ಗಂಗಾಂಬಿಕೆ ನಾಮಪತ್ರ ವಾಪಸ್‌

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಗಂಗಾಂಬಿಕೆ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ.

ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಕಾಂಗ್ರೆಸ್‌ ಪಕ್ಷವೂ ಚಿಕ್ಕಪೇಟೆಯಿಂದ ಆರ್‌.ವಿ.ದೇವರಾಜ್‌ ಅವರಿಗೆ ನೀಡಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗಂಗಾಂಬಿಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಗಂಗಾಂಬಿಕೆ ಮನವೊಲಿಸುವಲ್ಲಿ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ಸೂಚನೆಯಂತೆ ನಾನು ನಾಮಪತ್ರ ವಾಪಸ್‌ ಪಡೆಯುತ್ತೇನೆಂದು ನಮ್ಮ ಹೈಕಮಾಂಡ್‌ನ ಎಲ್ಲಾ ನಾಯಕರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನಾವು ಕಾಂಗ್ರೆಸ್ ಪಕ್ಷದಲ್ಲೇ ಇರಬೇಕು. ಹಾಗಾಗಿ ನಾಯಕರ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆಯುತ್ತಿದ್ದೇವೆ. ನಮ್ಮಿಂದ ಯಾವುದೇ ಡಿಮ್ಯಾಂಡ್‌ ಮಾಡಿಲ್ಲ ಎಂದರು.

ಮುಂದಿನ ವಿಧಾನ ಸಭೆ ಚುನಾವಣೆಗೆ ಚಿಕ್ಕಪೇಟೆಯಿಂದ ಆರ್‌.ವಿ.ದೇವರಾಜ್‌ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ.