Saturday, 10th May 2025

91ನೇ ವಸಂತಕ್ಕೆ ಕಾಲಿಟ್ಟ ಹೆಚ್​.ಡಿ ದೇವೇಗೌಡ, ಗಣ್ಯರ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. ಹೆಚ್’ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್​ ಡಿ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು.

ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ‘ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.