Sunday, 11th May 2025

ಆಹಾರ ತಜ್ಞ ಕೆ.ಸಿ.ರಘು ನಿಧನ

ಬೆಂಗಳೂರು: ಆಹಾರ ತಜ್ಞ ಕೆ.ಸಿ. ರಘು ಅವರು ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ರಘು ಅವರ ಪತ್ನಿ ಆಶಾ ರಘು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ್ದು, ನನ್ನ ಪತಿ ಶ್ರೀ ಕೆ.ಸಿ.ರಘು ಅವರು ಇಂದು ಬೆಳಗಿನ ಜಾವ ಸುಮಾರು 7.30ಕ್ಕೆ ನಮ್ಮನ್ನು ಅಗಲಿದ್ದಾರೆ. ಅವರು ಲಂಗ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು. ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ‘ಆಹಾರ ರಾಜಕೀಯ’ಮತ್ತು ‘ತುತ್ತು ತತ್ವ’ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

 

Leave a Reply

Your email address will not be published. Required fields are marked *