Sunday, 11th May 2025

ಚುನಾವಣಾ ರಾಜಕೀಯಕ್ಕೆ ಕೆ.ಎಸ್ ಈಶ್ವರಪ್ಪ ನಿವೃತ್ತಿ

KSE

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಚುನಾವಣಾ ರಾಜಕೀಯ ನಿವೃತ್ತಿ ಬೆನ್ನಲ್ಲೆ ಕೆ.ಎಸ್‌ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿದ್ದು, ಜೆ.ನಡ್ಡಾಗೆ ಪತ್ರ ಬರೆದು ರವಾನೆ ಮಾಡಿದ್ದೇನೆ. ನಾನು ಸ್ವ ಇಚ್ಚೆಯಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ. ನನಗೆ ಯಾವುದೇ ಒತ್ತಡ ಇರಲಿಲ್ಲ. ನನ್ನ ಪತ್ರವನ್ನು ಕೇಂದ್ರ ನಾಯಕರು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.