Sunday, 11th May 2025

ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಮೋದಿ ಚಾಲನೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿ ಳಿದ ಪ್ರಧಾನಿಯವರನ್ನು ಸಿಎಂ ಬಸವ ರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು.

ಬಳಿಕ ಯಲಹಂಕ ವಾಯುನೆಲೆಯಿಂದ ಹೆಲಿಕಾಪ್ಟರ್ ನಲ್ಲಿ ಮೇಖ್ರಿ ಸರ್ಕಲ್ ನ HQTCಗೆ ತೆರಳಿ ಭಾರತೀಯ ವಿಜ್ಞಾನ ಭವನಗೆ ರಸ್ತೆ ಮಾರ್ಗದ ಮೂಲಕ ತೆರಳಿದರು. ಭಾರತೀಯ ವಿಜ್ಞಾನ ಭವನದಲ್ಲಿ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಿ ಮೋದಿ ಉದ್ಘಾಟಿ ಸಿದರು.

ಇದಕ್ಕೂ ಮುನ್ನ ಮೇಖ್ರಿ ಸರ್ಕಲ್ ಬಳಿ ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಮೋದಿ… ಮೋದಿ… ಎಂದು ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು.

ಈ ವೇಳೆ ಪ್ರಧಾನಿ ಮೋದಿ ವಾಹನ ನಿಲ್ಲಿಸಿ ಜನರತ್ತ ಕೈ ಬೀಸಿ ಧನ್ಯವಾದಗಳನ್ನು ಅರ್ಪಿಸಿದರು.