Sunday, 11th May 2025

ಪ್ರಧಾನಿ ಮೋದಿಗೆ ಕನ್ನಡದಲ್ಲೇ ಶುಭಕೋರಿದ ಗೆಹ್ಲೋಟ್

ಬೆಂಗಳೂರು: ರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ.

ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು.

ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ”ಎಂದು ಟ್ವೀಟ್ ಮಾಡಿದ್ದಾರೆ.