Monday, 12th May 2025

25ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ,‌ ಇದೇ 25ರಂದು ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮ ದಲ್ಲಿ ಶ್ರೀಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್.ಪುರ- ವೈಟ್‌ಫೀಲ್ಡ್‌ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿರುವ ಅವರು ಮೆಟ್ರೊದಲ್ಲಿ ಸಂಚರಿಸಲಿದ್ದಾರೆ.

ವಿಧಾನಸೌಧ ಮುಂಭಾಗದಲ್ಲಿ ಸ್ಥಾಪಿಸಲಾಗುವ ಬಸವೇಶ್ವರ ಮತ್ತು ಕೆಂಪೇಗೌಡ ಪುತ್ಥಳಿ ಅನಾವರಣಗೊಳಿಸಲು ಇದೇ 27 ಅಥವಾ 29ರಂದು ಮತ್ತೊಮ್ಮೆ ಮೋದಿ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಆ ಬಳಿಕ, ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಯ ದಿನ ಘೋಷಿಸಬಹುದು ಎಂಬ ತರ್ಕವೂ ಇದೆ. ಆದರೆ, ಈ ಪುತ್ಥಳಿಗಳು ಇನ್ನೂ ಸಿದ್ಧವಾಗದೇ ಇರುವುದರಿಂದ 27 ಅಥವಾ 29ರಂದು ಮೋದಿ ಬರುವ ಸಾಧ್ಯತೆ ಕಡಿಮೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.