Monday, 12th May 2025

ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ವಿಚಾರಣೆಗೆ ಹಾಜರಾಗಲು ಆದೇಶ

ಬೆಂಗಳೂರು: 2022ರಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸಿಎಂಗೆ ಆದೇಶಿಸಿದೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಎಂ.ಬಿ.ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾರ್ಚ್ 7 ರಂದು ಸುರ್ಜೇವಾಲಾ, ಮಾರ್ಚ್ 11 ರಂದು ಎಂ.ಬಿ.ಪಾಟೀಲ್ ಮತ್ತು ಮಾರ್ಚ್ 15 ರಂದು ರಾಮಲಿಂಗಾ ರೆಡ್ಡಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ.

2022ರಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಅಂದಿನ ವಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮೆರವಣಿಗೆ ನಡೆಸಿದ್ದರು.

ಪಿಎಸ್‌ಐ ಜಾಹಿದಾ ಅವರನ್ನು ಅನಗತ್ಯವಾಗಿ ಪ್ರತಿವಾದಿಯನ್ನಾಗಿ ಮಾಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಇತರರಿಗೆ ಹೈಕೋರ್ಟ್ 10,000 ರೂ.ಗಳ ದಂಡ ವಿಧಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಈ ಆದೇಶ ಹೊರಡಿಸಿದ್ದಾರೆ.

2022 ರಲ್ಲಿ ರಸ್ತೆ ತಡೆ ಮತ್ತು ಸಾರ್ವಜನಿಕರಿಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *