Sunday, 11th May 2025

ಕನಕಪುರದಲ್ಲಿ ಆರ್​.ಅಶೋಕ್’ಗೆ, ವರುಣದಲ್ಲಿ ವಿ.ಸೋಮಣ್ಣಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿಸಿದೆ.

ಮೈಸೂರಿನ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣದಲ್ಲಿದ್ದಾರೆ. ಸಿದ್ದರಾಮಯ್ಯ ಮನ್ನಡೆಯಲ್ಲಿದ್ದರೆ, ಬಿಜೆಪಿಯ ವಿ.ಸೋಮಣ್ಣ ಹಿನ್ನಡೆಯಲ್ಲಿದ್ದಾರೆ. ಅದೇ ರೀತಿಯಾಗಿ ಕನಕಪುರ ಕ್ಷೇತ್ರದಲ್ಲಿ ಶಿವಕುಮಾರ್ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ಆರ್​.ಅಶೋಕ್ ಸಹ ಹಿನ್ನಡೆ ಕಂಡಿದ್ದಾರೆ.

ರಾಜ್ಯ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಇವರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ ಪ್ರಬಲ ನಾಯಕರಾದ ಆರ್​.ಅಶೋಕ್ ಮತ್ತು ವಿ.ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ.

ಗೋವಿಂದರಾಜ ನಗರ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ಸೋಮಣ್ಣ ಸದ್ಯ ಸಿದ್ದರಾಮಯ್ಯ ವಿರುದ್ಧ ವರುಣ ಕ್ಷೇತ್ರದ ಜೊತೆಗೆ ಚಾಮರಾಜನಗರದಲ್ಲೂ ಸ್ಪರ್ಧೆ ಮಾಡಿದ್ದಾರೆ. ಅದೇ ರೀತಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಶೋಕ್​ ಕನಕಪುರ ಕ್ಷೇತ್ರದಲ್ಲೂ ಡಿಕೆ ಶಿವಕುಮಾರ್ ವಿರುದ್ಧ ಅಖಾಡಕ್ಕೆ ಇಳಿದಿದ್ದಾರೆ.