Tuesday, 13th May 2025

ರೈಲ್ವೆ ನಿಲ್ದಾಣದಲ್ಲಿ ಸ್ವಾಮೀಜಿಗೆ ಹೃದಯಾಘಾತ

ಯಾದಗಿರಿ: ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ(48) ಗೆ ಹೃದಯಾ ಘಾತ ಸಂಭವಿಸಿ ಲಿಂಗೈಕ್ಯರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ ರಾಗಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಯಾದಗಿರಿಯ ಮಠಕ್ಕೆ ಸ್ವಾಮೀಜಿ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾದಿದ್ದರು. ಮುಂದಿನ ತಿಂಗಳು ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆಗೆ ಸಿದ್ಧತೆ ನಡೆಸಿದ್ದರು. ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು.