Saturday, 10th May 2025

ಟಿ.ಎ ಶರವಣರಿಗೆ ಜೆಡಿಎಸ್ ನಿಂದ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಕೊನೆಯ ಕ್ಷಣದಲ್ಲಿ ಟಿ.ಎ ಶರವಣ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ.

ಮಂಗಳವಾರ ಮಧ್ಯಾಹ್ನ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಕೊನೆಯ ಕ್ಷಣವಾಗಿತ್ತು. ಅತ್ತ ಬಿಜೆಪಿ, ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಯನ್ನು ಪ್ರಕಟಿಸಿದ್ದರೇ, ಇತ್ತ ಜೆಡಿಎಸ್ ಕೂಡ ತನ್ನ ಹುರಿಯಾಳುವನ್ನು ಘೋಷಿಸಿದೆ.

ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಅವರಿಗೆ, ಮತ್ತೆ ಪರಿಷತ್ ಚುನಾವಣೆಗಾಗಿ ಟಿಕೆಟ್ ನೀಡಲಾಗಿದೆ. ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿಯವರು ಅವರಿಗೆ ಬಿ ಫಾರಂ ಕೂಡ ವಿತರಿಸಿದರು. ಈ ಬಳಿಕ ಟಿ.ಎ ಶರವಣ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಪತ್ರ ಸಲ್ಲಿಸಿದರು.