Sunday, 11th May 2025

BJP National Membership Campaign: ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿದೆ-ಸೀಕಲ್ ರಾಮಚಂದ್ರಗೌಡ

ಶಿಡ್ಲಘಟ್ಟ: ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿದ್ದೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ಗ್ರಾಮಾಂತರ ಮಂಡಲ ವತಿಯಿಂದ ಹಮ್ಮಿ ಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾತಿ ಧರ್ಮ ಬಡತನ ಸಿರಿತನದ ತಾರತಮ್ಯ ಇಲ್ಲದೆ ಎಲ್ಲರನ್ನೂ ಸಮಾನತೆಯಿಂದ ನೋಡುವ ಪಕ್ಷ ಬಿಜೆಪಿ ಮಾತ್ರ. ಜಿಲ್ಲೆಯಲ್ಲಿಯೆ ಅತಿ ಹೆಚ್ಚಿನ ಸದಸ್ಯತ್ವವನ್ನು ಮಾಡಿಸುವ ಗುರಿ ಹಾಕಿಕೊಂಡಿದ್ದು ಪ್ರಾಮಾಣಿಕ ಪ್ರಯತ್ನ ಮಾಡ ಲಿದ್ದೇವೆ. ಪಕ್ಷದಿಂದ ಆಗುತ್ತಿರುವ ಅಭಿವೃದ್ದಿ, ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷದಲ್ಲಿ ಸದಸ್ಯತ್ವವನ್ನು ನೋಂದಾಯಿಸಿಕೊಳ್ಳಲು ಮುಂದೆ ಬರುತ್ತಿರುವವರ ಸಂಖ್ಯೆಯೂ ನಿರೀಕ್ಷೆಗೂ ಮೀರಿ ಹೆಚ್ಚುತ್ತಿರುವುದು  ಸಂತೋಷ ತಂದಿದೆ ಎಂದರು.

ಇದೇ ವೇಳೆ ಕೊತ್ತನೂರು ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಸದಸ್ಯತ್ವವನ್ನು ನೋಂದಾಯಿತಿ ಗುರ್ತಿನ ಚೀಟಿಯನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯರು, ಸದಸ್ಯತ್ವ ನೋಂದಣಿ ಅಭಿಯಾನದ ಬೆಂಗಳೂರು ಗ್ರಾಮಾಂತರ ಪ್ರಭಾರಿ ಕೇಶವ ಪ್ರಸಾದ್, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಅಶ್ವಿನಿಶಂಕರ್, ಜಿಲ್ಲಾಧ್ಯಕ್ಷ ಆಂಜನೇಯಗೌಡ, ಪ್ರಧಾನ ಕಾರ್ಯದರ್ಶಿ ಮುರಳಿ, ಗ್ರಾಮಾಂತರ ಅಧ್ಯಕ್ಷ ಸೀಕಲ್ ಆನಂದಗೌಡ, ನರೇಶ್, ಸುರೇಂದ್ರಗೌಡ, ಕನಕ ಪ್ರಸಾದ್ ಮತ್ತಿತರರು ಮುಖಂಡರು ಹಾಜರಿದ್ದರು.

ಇದನ್ನೂ ಓದಿ: BJP Membership: 13 ದಿನ ಕಳೆದರೂ ಎಂಟು ಲಕ್ಷ ದಾಟದ ಬಿಜೆಪಿ ಪಕ್ಷ ಸದಸ್ಯತ್ವ ?

Leave a Reply

Your email address will not be published. Required fields are marked *