Sunday, 11th May 2025

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ

ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ಪ್ರಾರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಫೆ.23ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು ಶಿಕ್ಷಕರಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಒಟ್ಟು 58 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆಮತದಾನ ನಡೆಯಲಿದೆ. ಹಳೆಯ ಬ್ಯಾಲೆಟ್ ಪೇಪರ್ ಮಾದರಿ ಮತದಾನ ನಡೆಯುತ್ತಿದೆ. ಇವಿಎಂ ಯಂತ್ರವನ್ನು ಬಳಸಲಾಗುತ್ತಿಲ್ಲ. ಪ್ರಾಶಸ್ತ್ಯ ಮಾದರಿಯ ಮತದಾನವಾದ ಕಾರಣ ಹಳೆಯ ಪದ್ಧತಿಯನ್ನೇ ಅನುಸರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೆದ್ದವರ ಅವಧಿ 2026ರ ನ.11 ರವರೆಗೆ ಇರಲಿದೆ. ಪುಟ್ಟಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಎನ್ ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ವಕೀಲ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದಾರೆ.

Leave a Reply

Your email address will not be published. Required fields are marked *