Sunday, 11th May 2025

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಏ.19 ರಂದು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗಧಿಯಾಗಿತ್ತು. ಆದರೆ ದಿಢೀರ್ ಬಿ.ವೈ. ವಿಜಯೇಂದ್ರ ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 19 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ವಿಜಯೇಂದ್ರ ನಾಮಪತ್ರ ಸಲ್ಲಿಕೆಗೆ ಆಗಮಿಸುತ್ತಿದ್ದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಬಳಿಕ ಶಿಕಾರಿಪುರ ತಹಶೀಲ್ದಾರ್ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.