Saturday, 10th May 2025

ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ: ಬೊಮ್ಮಾಯಿ

ಬೆಳಗಾವಿ: ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ಸಂಬಂಧ ನವದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕ ರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಬೆಳಗಾವಿಯಲ್ಲಿ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.

ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರ ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ತಿಳಿಸಿದರು.