Saturday, 10th May 2025

ಕಪ್ಪತಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ!!

-ಆತಂಕದಲ್ಲಿ ಗ್ರಾಮಸ್ಥರು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತಗುಡ್ಡದಲ್ಲಿ ಚಿರತೆ ಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮದ ಜನತೆಯಲ್ಲಿ ಆತಂಕ ಮೂಡಿಸಿದೆ.

ಬುಧವಾರ ಮುಂಜಾನೆಯ ಸಮಯದಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಲ ದಾರಿ ಹೋಕರು ಚಿರತೆಯು ರಸ್ತೆಯಂಚಿನ ಕಾಡಿನಲ್ಲಿ ಅಡ್ಡಾಡುತ್ತಿರುವುದನ್ನು ಗಮನಿಸಿದ್ದ ಲ್ಲದೇ, ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರಿಂದೊಬ್ಬರಿಗೆ ಹಂಚುವ ಮೂಲಕ ವೈರಲ್ ಆಗುತ್ತಿದೆ.

ಈ ಹಿಂದೆಯೂ ಕೂಡ ಕಪ್ಪತಗುಡ್ಡದ ಸರಹದ್ದಿನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರೆಲ್ಲರೂ ಭಯಭೀತರಾಗಿದ್ದಾರೆ.