Monday, 12th May 2025

Chickballapur News: ಎನ್.ನರಸಿಂಹಮೂರ್ತಿಗೆ ಗುರುಶ್ರೇಷ್ಠ ಪ್ರಶಸ್ತಿ ಗರಿ

ಚಿಕ್ಕಬಳ್ಳಾಪುರ: ಕರ್ನಾಟಕ ಪ್ರೆಸ್ ಕ್ಲಬ್ ಮತ್ತು ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಪರಿಷತ್ ವತಿಯಿಂದ ಪ್ರತಿ ವರ್ಷ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವ 2024ರ ಗುರು ಶ್ರೇಷ್ಠ ಪ್ರಶಸ್ತಿಗೆ ಸರಕಾರಿ ಮಹಿಳಾ ಕಾಲೇಜಿನ ಕನ್ನಡ ಅತಿಥಿ ಉಪನ್ಯಾಸಕ ಎನ್.ನರಸಿಂಹಮೂರ್ತಿ ಭಾಜನರಾಗಿದ್ದು ಹಿತೈಷಿಗಳು, ಅಪಾರ ಬಂಧು ಬಳಗ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಮತ್ತು ಕರ್ನಾಟಕ ಲೋಕಾಯುಕ್ತ ನ್ಯಾಯಾಧೀಶ ಶ್ರೀ ಶುಭವೀರ್ ಜೈನ್ ಉಪಸ್ಥಿತಿಯಲ್ಲಿ ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: Chickballapur News: ಸಾಕ್ಷರತೆಯು ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬು, ವ್ಯಕ್ತಿತ್ವ ರೂಪಿಸಲು ಶಿಕ್ಷಣ ಅಗತ್ಯ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

Leave a Reply

Your email address will not be published. Required fields are marked *