Saturday, 10th May 2025

Chikkaballapur News: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಯಲ್ಲಿದ್ದ ಪೀಠೋಪಕರಣಗಳು ಸುಟ್ಟು ಭಸ್ಮ

ಚಿಂತಾಮಣಿ: ನಗರದ ಅಶ್ವಿನಿ ಬಡಾವಣೆಯ ನವೀನ್ ಶಾಲೆಯ ಮುಂಭಾಗದ ನಿವಾಸಿ ಯಶೋದಮ್ಮ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟಿವಿ, ಪ್ರಿಡ್ಜ್, ಪೀಠೋಪಕರಣಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ೯೫ ವರ್ಷದ ವೃದ್ದನಿಗೆ ಯಾವುದೇ ತೊಂದರೆ ಆಗಿಲ್ಲ.

ಯಶೋದಮ್ಮ ನಗರಸಭೆಯಲ್ಲಿ ಉದ್ಯೋಗ ಮಾಡುತ್ತಾರೆ. ಎಂದಿನ0ತೆ ಮನೆಗೆ ಬಾಗಿಲು ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಕಂಡು ಅಕ್ಕಪಕ್ಕದವರು ಸುದ್ದಿ ಮುಟ್ಟಿಸಿದ್ದಾರೆ.

ಅಗ್ನಿಶಾಮಕದಳ ಮತ್ತು ನಗರಸಭೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಮನೆಯಲ್ಲಿನ ಅನೇಕ ವಸ್ತುಗಳು ಸುಟ್ಟುಭಸ್ಮವಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಕೃತಿ ವಿಕೋಪದಡಿಯಲ್ಲಿ ಪರಿಹಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Chikkaballapur News: ಮಳೆಹಾನಿ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ