Wednesday, 14th May 2025

Chikkaballapur News: ನ.27 ರಂದು ವಿಕಲಚೇತನರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಚಿಕ್ಕಬಳ್ಳಾಪುರ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವಿಕಲಚೇತನರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನವೆಂಬರ್ ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸದರಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.