ಅಂಬೇಡ್ಕರ್ ಪುತ್ಥಳಿಗೆ ಕೊಳಕು ಬಟ್ಟೆ ಕಟ್ಟಿ ಅಪಮಾನ
ಚಿಂತಾಮಣಿ: ಅಮಿತ್ ಶಾ ರವರ ಹೇಳಿಕೆ ಹಾಗೂ ಚಿಂತಾಮಣಿ ನಗರದ ಅಂಬೇಡ್ಕರ್ ಭವನದ ಮುಂಭಾಗವಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಬಾ ಸಾಹೇಬ್ ಡಾ!ಬಿಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕೊಳಕು ಬಟ್ಟೆ ಕಟ್ಟಿ ಅಪಮಾನ ಮಾಡಿರುವವರ ವಿರುದ್ಧ ತಾಲೂಕು ಕಚೇರಿ ಮುಂಭಾಗ ದಲಿತ ಪರ ಸಂಘಟನೆಗಳಿಂದ ಅನಿರ್ದಿಷ್ಟಾ ವಧಿ ಧರಣಿ ಮುಂದುವರೆಯುತ್ತಿದ್ದು ಇದೇಗೆ ಐದನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಮಧ್ಯಾಹ್ನ ತಾಲೂಕು ಕಚೇರಿ ಆವರಣದಿಂದ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಅರಬೆತ್ತಲೆ ಮೆರವಣಿಗೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಅಧಿಕಾರಿಗಳ ವಿರುದ್ಧ ದಿಕ್ಕಾರಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
ಈ ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಘೋಷಣೆಗಳು ಕೂಗಿದರು.
ನಂತರ ಮಾತನಾಡಿದ ದಲಿತ ಮುಖಂಡ ಹಾಗೂ ವಕೀಲರಾದ ಗೋಪಿ ಅಮಿತ್ ಶಾ ಅಂಬೇಡ್ಕರ್ ರವರ ಬಗ್ಗೆ ಅವಹೇಳನ ಮಾತು ಆಡಿರುವದು ಸರಿ ಇಲ್ಲ ಕೂಡಲೇ ಅವರನ್ನು ಗಡಿಪಾರು ಮಾಡಬೇಕು ಎಂದ ಅವರು ಚಿಂತಾಮಣಿ ನಗರದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಬಾ ಸಾಹೇಬ್ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕೊಳಕು ಬಟ್ಟೆ ಕಟ್ಟಿ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಪಮಾನ ಮಾಡಿದೆ ಈ ಕೂಡಲೇ ಕೊಳಕು ಬಟ್ಟೆಯನ್ನು ತೆರವುಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಹೋರಾಟಗಳು ನಡೆಯುತ್ತವೆ ಎಂದು ಎಚ್ಚರಿಕೆ ನೀಡಿದರು.
ಇನ್ನೂ ಅರೆಬೆತ್ತಲೆ ಮೆರವಣಿಗೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು.