Tuesday, 13th May 2025

Chikkaballapur News: ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ

ಚಿಂತಾಮಣಿ: ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ನಗರದ ತಾಲ್ಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯ ವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವು ದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮ ಆಡಳಿತ ಅಧಿಕಾರಿ ದಲಾಯಿಲ್ ಖಾನ್  ಹೇಳಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶರಣಯ್ಯ ಹಿರೇಮಠ್,ಕಾರ್ಯದರ್ಶಿ ದಿವ್ಯಶ್ರೀ, ಗೌರವಾಧ್ಯಕ್ಷರಾದ ನಿರಂಜನ್ ಎಸ್ಎಲ್, ಖಜಾಂಚಿ ಮುನಿರಾಜು, ಸದಸ್ಯರಾದ ಗೋಕುಲ್, ನವೀನ್ ಕುಮಾರ್, ಕೊಟ್ರೇಶ್, ನಾಗವೇಣಿ, ಪ್ರಭು, ನಾಗರಾಜ್ ಆರ್.ಎಂ.ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.