Saturday, 24th May 2025

ಪರಿಷತ್ ಸದಸ್ಯ ಆರ್.ರಾಜೇಂದ್ರ ಹೇಳಿಕೆ ವಿರುದ್ಧ ಕಾಂಗ್ರೆಸ್ ಮುಖಂಡರ ವಿರೋಧ

ಗುಬ್ಬಿ: ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ  ಜೊತೆ ಹೆಜ್ಜೆ ಹಾಕಿದ ತಾಲೂಕಿನ ನಿಷ್ಠಾವಂತ ಕಾಂಗ್ರೆಸ್ ಕಾರ್ಯ ಕರ್ತರಿಗೆ ಅಭಿನಂದನೆ ತಿಳಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹೊನ್ನಗಿರಿ ಗೌಡ ರಾಜೇಂದ್ರ ರವರು ಶಾಸಕ ಎಸ್ಆರ್ ಶ್ರೀನಿವಾಸ್ ಜೊತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಎಸ್ ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಅವರನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡುವ ಮೂಲಕ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದು ಅವರ ವಿರುದ್ಧ ರಾಜ್ಯ ಹಾಗೂ ಜಿಲ್ಲಾಧ್ಯಕ್ಷರಿಗೆ ದೂರು ನೀಡುವುದಾಗಿ ತಿಳಿಸಿದರು.
ಶಾಸಕರ ಋಣ ನನ್ನ ಮೇಲಿದೆ ಎಂದು ಹೇಳಿಕೆ ನೀಡುತ್ತಿದ್ದು ಯಾವ ಋಣ ಅವರ ಮೇಲಿದೆ ಎಂದು ಕಾರ್ಯಕರ್ತರಿಗೆ ಸ್ಪಷ್ಟ ಪಡಿಸಬೇಕು. ವೈಯಕ್ತಿಕ ಋಣವಿದ್ದರೆ ತೀರಿಸಿ ಕೊಳ್ಳಲಿ ಕಾಂಗ್ರೆಸ್ ಪಕ್ಷಕ್ಕಾಗಿ ಶಾಸಕರ ಋಣ ಏನಿದೆ ಎಂದು ಪ್ರಶ್ನಿಸಿದರು.
ಮುಖಂಡ ಜಿ ಎಸ್ ಪ್ರಸನ್ನಕುಮಾರ್ ಮಾತನಾಡಿ ಹಲವಾರು ವರ್ಷಗಳಿಂದ ಪಕ್ಷದ ವರ್ಚಸ್ಸನ್ನು ಹೆಚ್ಚಿಸುತ್ತಾ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿದ ಸಾವಿರಾರು ಕಾರ್ಯಕರ್ತರಿದ್ದಾರೆ ಹಾಗೂ ಮುಖಂಡರುಗಳಿದ್ದಾರೆ ಅವರುಗಳನ್ನು ಪರಿಗಣನೆಗೆ ತೆಗೆದು ಕೊಳ್ಳದೆ ಗೊಂದಲ ಉಂಟು ಮಾಡುವ ಹೇಳಿಕೆ ನೀಡುತ್ತಿರುವ ರಾಜೇಂದ್ರ ರವರು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆಯುತ್ತಿದ್ದಾ ರೆಂದು ಆರೋಪಿಸಿದರು.
ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರವರ ಪರಿಶ್ರಮದಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿರುವುದು ಆದರ್ಶ ದಾಯಕ ಲೀಡರ್ ಶಿಪ್ ಹಾಗೂ ಜನಪರ ಅಭಿವೃದ್ಧಿ ಕೆಲಸಗಳು ಅಭಿವೃದ್ಧಿ ಹೆಸರಲ್ಲಿ ಸುಳ್ಳು ಹೇಳುವವರನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರಸಿಂಹಯ್ಯ, ಮುಖಂಡ ಹೊನ್ನಗಿರಿ ಗೌಡ, ಜಿಎಸ್ ಪ್ರಸನ್ನಕುಮಾರ್, ನಿಂಬೆಕಟ್ಟೆ ಜಯಣ್ಣ, ಸಲೀಂ ಪಾಷಾ, ಮಹಮ್ಮದ್ ಸಾಧಿಕ್, ಮಂಜುನಾಥ್, ರಂಗನಾಥ್, ಶಿವಾನಂದ್, ಸಿದ್ದೇಶ್,ರೂಪ, ಸೌಭಾಗ್ಯಮ್ಮ, ಹೇಮಂತ್ ಮುಂತಾದವರು ಹಾಜರಿದ್ದರು.