Sunday, 11th May 2025

ದ.ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ಬ್ರೇಕ್​

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ಬ್ರೇಕ್​ ಹಾಕಲಾಗಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಹೊರತು ಪಡಿಸಿ ಡಬಲ್ ರೈಡ್​ಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಗುರುವಾರ ಸುದ್ದಿ ಗಾರರ ಜತೆ ಮಾತನಾಡಿದ ಅಲೋಕ್ ಕುಮಾರ್, ಆ.5ರ ತನಕ ನಿಷೇಧಾಜ್ಞೆ ಹಾಗೂ ರಾತ್ರಿ ನಿರ್ಬಂಧ ಜಾರಿಯಲ್ಲಿದೆ. ಆ ಬಳಿಕ ಒಂದಷ್ಟು ನಿಯಮ ಸಡಿಲಗೊಳಿಸಲಾಗುವುದು.

ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತು ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು. ಮಹಿಳೆಯರು, ಮಕ್ಕಳು ಮತ್ತು ಹಿರಿಯರಿಗೆ ಇದರಿಂದ ವಿನಾಯಿತಿ ನೀಡಲಾಗುವುದು ಎಂದರು

ಕೋಮುದ್ವೇಷಕ್ಕೆ ಸಂಬಂಧಿಸಿ ಈ ಹಿಂದೆ ನಡೆದ ಕೊಲೆ ಪ್ರಕರಣಗಳು ನ್ಯಾಯಾಲಯದಲ್ಲಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.