Sunday, 11th May 2025

ಶಿರಸಿ ಮೂಲದ ಪ್ರತಿಭೆಗೆ ಒಲಿದ ಪ್ರಶಸ್ತಿ: ಡಾ.ಶೃತಿ ಹೆಗಡೆ ವಿಶ್ವ ಸುಂದರಿ 2024

ಶಿರಸಿ: ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿಯೊಬ್ಬಳು ಇತ್ತೀಚಿಗೆ ಅಮೇರಿಕಾದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾಳೆ.

ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೇರಿಕಾದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾಳೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದಳು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ ಅಮೇರಿಕಾದಲ್ಲಿ ನಡೆದ ವಿಶ್ವ ಸುಂದರಿ ಕಿರೀಣ ಮುಡಿಗೇರಿಸಿಕೊಂಡಿ ದ್ದಾಳೆ.

ಅಮೇರಿಕಾದ ಪ್ಲೋರಿಡಾದಲ್ಲಿ ಕಳೆದ ಜೂ.೬ ರಿಂದ ೧೦ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟೂ ೪೦ ದೇಶಗಳ ಸುಂದರಿ ಯವರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌

ಹುಬ್ಬಳ್ಳಿಯಲ್ಲಿಯೇ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ ಎಂಬುದು ಉಲ್ಲೇಖನೀಯ.

Leave a Reply

Your email address will not be published. Required fields are marked *