Thursday, 15th May 2025

Freedom Park_Protest: 7ನೇ ವೇತನ ಆಯೋಗದ ವರದಿಯಲ್ಲಿ ನಿವೃತ್ತ ನೌಕರರಿಗೆ ತಾರತಮ್ಯ: ಸೆ.18 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: 7 ನೇ ವೇತನ ಆಯೋಗದ ವರದಿಯಂತೆ ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿಯಲ್ಲಿ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಸೆ.18 ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಹತ್ತು ಸಾವಿರಕ್ಕೂ ಅಧಿಕ ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ತಾರತಮ್ಯ ಸರಿಪಡಿಸುವತಕ ಹೋರಾಟ ಮುಂದುವರೆಸುವುದಾಗಿ ವೇದಿಕೆ ರಾಜ್ಯ ಮಹಾ ಸಂಚಾಲಕ ಎಂ.ಪಿ.ಎಂ ಶಣ್ಮುಖಂ ತಿಳಿಸಿದ್ದಾರೆ,

ಕಳೆದ 2022 ರ ಜುಲೈ ನಿಂದ ಈ ವರ್ಷದ ಜುಲೈವರೆಗೆ ನಿವೃತ್ತರಾಗಿರುವ ಅಧಿಕಾರಿಗಳು ಹಾಗೂ ನೌಕರರಿಗೆ 7ನೇ ವೇತನ ಆಯೋಗದ ವರದಿಯಲ್ಲಿ ಪಿಂಚಣಿ ಸೌಲಭ್ಯಗಳಲ್ಲಿ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿಪಡಿಸಿ ಸೌಲಭ್ಯ ಒದಗಿಸಿಕೊಡಬೇಕೆಂದು ಹೋರಾಟ ನಡೆಸುತ್ತಿದ್ದೇವೆ.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಮತ್ತು ನಿವೃತ್ತ ನೌಕರ ಸಂಘದ ಹಾಲಿ ರಾಜ್ಯಾಧ್ಯಕ್ಷ ಡಾ. ಎಲ್ ಭೈರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Farmers Protest: ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Leave a Reply

Your email address will not be published. Required fields are marked *