Saturday, 10th May 2025

ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಫೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ ಗಳಾಗಿವೆ.

ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ ಬಳಿಯಲ್ಲಿ ಅಥಣಿ ಘಟಕ್ಕೆ ಸೇರಿದ 25 ಪ್ರಯಾಣಿಕರಿದ್ದ ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

ಬಸ್ ಪಲ್ಟಿಯಾಗಿದ್ದನ್ನು ಕಂಡ ಸ್ಥಳೀಯರು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.